ಡಾ. ಕಂಬಾರರನ್ನು ಅ.ಭಾ.ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಒತ್ತಾಯ

ಕೊಪ್ಪಳ ಅ.೩ ಗಂಗಾವತಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಡಾ. ಚಂದ್ರಶೇಖರ ಕಂಬಾರ ಅವರನ್ನು ಆಯ್ಕೆಮಾಡಲು ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜ ಒತ್ತಾಯಿ ಸಿದೆ. ಇಂದು ಕೊಪ್ಪಳದ ಸಿರಸಪ್ಪಯ್ಯನ ಮಠದಲ್ಲಿ ಶೇಷಪ್ಪಯ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಸಭೆ ಸೇರಿ ಈ ನಿರ್ಣಯ ಕೈಗೊಳ್ಳಲಾಯಿತು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಥಮ ಕುಲಪತಿಗಳಾಗಿ ಸೇವೆ ಸಲ್ಲಿಸಿದ ವಿಶ್ವಕರ್ಮ ಸಮಾಜದ ಧೀಮಂತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರನ್ನು ಈ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕೆಂದು ಸಮಾಜದ ಹಿರಿಯರು ಹಾಗೂ ಕೊಪ್ಪಳದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಟೇಲಿಂಗಾಚಾರ, ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ನಾಗಲಿಂಗಪ್ಪ ಪತ್ತಾರ, ಕೊಪ್ಪಳ ತಾಲೂಕ ಅಧ್ಯಕ್ಷ ರುದ್ರಪ್ಪ ಬಡಗೇರ, ಗಂಗಾವತಿ ತಾಲೂಕ ಅಧ್ಯಕ್ಷ ರವಿಶಂಕರ, ಯಲಬುರ್ಗಾ ತಾಲೂಕ ಅಧ್ಯಕ್ಷ ಈಶಪ್ಪ ಬಡಗೇರ, ಕುಷ್ಟಗಿ ತಾಲೂಕ ಅಧ್ಯಕ್ಷ ಎಚ್ಚರಪ್ಪ ಬಡಗೇರ, ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ಜಿಲ್ಲಾ ಖಜಾಂಚಿಗಳಾದ ಡಿ.ಎಂ ಬಡಿಗೇರ ಒತ್ತಾಯಿಸಿದ್ದಾರೆ.

No Comments to “ಡಾ. ಕಂಬಾರರನ್ನು ಅ.ಭಾ.ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಒತ್ತಾಯ”

add a comment.

Leave a Reply

You must be logged in to post a comment.