ಮುಂಬರುವ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮಧ್ಯೆ ನೇರ ಸ್ಪರ್ಧೆ- ಎಚ್‌ಡಿಕೆ ಭವಿಷ್ಯ

ಬೆಂಗಳೂರು, ಅ.೧೭ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ&ಜೆಡಿಎಸ್‌ ನಡುವೆ ನೇರ ಸ್ಪರ್ಧೆ ನಡೆಯಲಿದ್ದು ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಮೂಲೆ ಗುಂಪಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿಂದು ಪಕ್ಷದ ಕಚೇರಿಯಲ್ಲಿ ವಿವಿಧ ಪಕ್ಷಗಳ ಮುಖಂಡರುಗಳು ಜೆಡಿಎಸ್‌ ಸೇರ್ಪಡೆ ಕಾರ್ಯಕ್ರಮದ ಬಳಿಕ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್‌ ವಿರುದಟಛಿ ತೀವ್ರ ವಾಗ್ದಾಳಿ ನಡೆಸಿದರು. ಭೂಹಗರಣದ ಆರೋಪದಲ್ಲಿ ಜೈಲು ಸೇರಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕರಣವನ್ನು ಮುಂದಿಟ್ಟುಕೊಂಡು ಸಂಭ್ರಮಿಸುತ್ತಿರುವ ಕಾಂಗ್ರೆಸ್‌ ನಾಯಕರು, ಮುಂದಿನ ಚುನಾವಣೆಯಲ್ಲಿ ಅಪ್ರಸ್ತುತರಾಗಲಿದ್ದು, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. ಕಾಂಗ್ರೆಸ್‌ಧೂಳಿಪಟವಾಗಲಿದೆ ಎಂದರು. ಯಡಿಯೂರಪ್ಪ ಪ್ರಕರಣವನ್ನು ಉದಾಹರಿಸಿ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವ ಪ್ರತಿಪಕ್ಷ ನಾಯಕ ಸಿದಟಛಿರಾಮಯ್ಯ ಹಗರಣಗಳ ಸುಳಿಯಲ್ಲಿ ಮುಳುಗಿರುವ ಕೇಂದ್ರ ರೆಡ್ಡಿ ಮೇಲೆ ತೋಳೇರಿಸಿಕೊಂಡು ಹೋದದ್ದೇ ಸಿದ್ದು ಸಾಧನೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮಧ್ಯೆ ನೇರ ಸ್ಪರ್ಧೆ& ಎಚ್‌ಡಿಕೆ ಭವಿಷ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತಾರೆಯೇ ಎಂದರು. ಕೇಂದ್ರದ ಯುಪಿಎ ಸರ್ಕಾರದಲ್ಲಿ ೨ಜಿ ಸ್ಪೆಕ್ಟ್ರಂ, ಕಾಮನ್‌ವೆಲ್ತ್‌ ಕ್ರೀಡಾಕೂಟ ಸೇರಿದಂತೆ ಸಾವಿರಾರು ಕೋಟಿ ರೂಗಳ ಭ್ರಷ್ಟಾಚಾರ ನಡೆದಿದೆ. ಆದರೂ, ಯುಪಿಎ ಸರ್ಕಾರ ಅಧಿಕಾರದಲ್ಲಿ ಮುಂದುವರೆದಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಕಾಂಗ್ರೆಸ್‌ ಮುಖಂಡರು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಕೇಂದ್ರ ಸರ್ಕಾರವನ್ನು ಕೂಡಲೇ ವಜಾಗೊಳಿಸಲು ಒತ್ತಾಯಿಸುವ ತಾಕತ್ತು ತೋರಿಸು ತ್ತಾರೆಯೇಎಂಬುದನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭೂಹಗರಣದಲ್ಲಿ ಸಿಲುಕಿ ಜೈಲು ಪಾಲಾಗಿರುವುದು ಸಂಭ್ರಮ ಪಡುವ ವಿಷಯವಲ್ಲ. ಇದು ಇಡೀ ರಾಜ್ಯಕ್ಕೆ ಆದ ಅಪಮಾನವಾಗಿದೆ. ಕಾಂಗ್ರೆಸ್‌ ಮುಖಂಡರು ಇದನ್ನೇ ದೊಡ್ಡದಾಗಿ ಮಾಡಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿರುವುದು ಆ ಪಕ್ಷದ ಸಂಸ್ಕೃತಿಯನ್ನು ತೋರಿಸುತ್ತಿದೆ ಎಂದು ಟೀಕಿಸಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದಲ್ಲಿರುವವರೆಗೂ ಕಾಂಗ್ರೆಸ್‌ ಪಕ್ಷ ಹಾಗೂ ಅಲ್ಲಿನ ನಾಯಕರ ಬಗ್ಗೆ ಯಾವ ಹೇಳಿಕೆಗಳನ್ನು ನೀಡಿದ್ದರು ಎಂಬುದನ್ನು ಮರೆತಿದ್ದಾರೆ. ಇದೀಗ ಕಾಂಗ್ರೆಸ್‌ ಸೇರ್ಪಡೆಯಾದ ಬಳಿಕ ಆ ಪಕ್ಷದ ಮುಖಂಡರನ್ನು ಹಾಡಿಹೊಗಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಅವರೇ ಮನವರಿಕೆ ಮಾಡಿಕೊಳ್ಳಲಿ ಎಂದರು. ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾದ ಬಳಿಕ ಮಾಡಿದ ಏಕೈಕ ಸಾಧನೆ ಎಂದರೆ ವಿಧಾನಮಂಡಲದಲ್ಲಿ ಸಚಿವ ಜನಾರ್ಧನರೆಡ್ಡಿ ಮೇಲೆ ತೋಳೇರಿಸಿಕೊಂಡು ಹೋಗಿದ್ದು ಬಿಟ್ಟರೆ, ಬೇರೇನೂ ಸಾಧನೆ ಮಾಡಿಲ್ಲ. ಇಂತಹ ನಾಯಕರಿಂದ ಮತ್ತೇನನ್ನು ನಿರೀಕ್ಷಿಸಲು ಸಾಧ್ಯವೂ ಇಲ್ಲ ಎಂದು ಟೀಕಾಪ್ರಹಾರ ನಡೆಸಿದರು. ತಮ್ಮ ಕೆಲಸಗಳು ಆಗಬೇಕಾದ ಸಂದರ್ಭದಲ್ಲಿ ರಾತ್ರಿ ವೇಳೆ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತಿದ್ದ ಕಾಂಗ್ರೆಸ್‌ ಪಾಳೆಯ ಇದೀಗ ಅವರು ಜೈಲು ಸೇರಿದ ಮೇಲೆ ಅನಗತ್ಯ ಟೀಕೆಗಳನ್ನು ಮಾಡುತ್ತಿರುವುದು ವಿಪರ್ಯಾಸ. ಇದೆಲ್ಲವನ್ನೂ ರಾಜ್ಯದ ಜನತೆ ಸೂಕ್ಷ್ಮದಿಂದ ಗಮನಿಸುತ್ತಿದ್ದಾರೆ ಎಂದರು. ಬಿಜೆಪಿ ಸರ್ಕಾರದ ಹಗರಣಗಳ ಸರಮಾಲೆಯನ್ನೇ ಜೆಡಿಎಸ್‌ ಬಹಿರಂಗಪಡಿಸುವ ಮೂಲಕ ಜನರಿಗೆ ಸತ್ಯಾಂಶ ತಿಳಿಸುವ ಪ್ರಯತ್ನ ನಡೆಸಿತ್ತು. ಆದರೆ, ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದು ಹೊರತುಪಡಿಸಿದರೆ ಕಾಂಗ್ರೆಸ್‌ ಮುಖಂಡರ ಸಾಧನೆಯಾದರೂ ಏನು ಎಂಬುದನ್ನು ಅವರೇ ತಿಳಿಸಲಿ ಎಂದು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಜೆಡಿಎಸ್‌ ಪಕ್ಷವನ್ನು ಸಧೃಢಗೊಳಿಸಿ ಚುನಾವಣೆಗೆ ಸಜ್ಜುಗೊಳಿಸಲಾಗುವುದು ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

No Comments to “ಮುಂಬರುವ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮಧ್ಯೆ ನೇರ ಸ್ಪರ್ಧೆ- ಎಚ್‌ಡಿಕೆ ಭವಿಷ್ಯ”

add a comment.

Leave a Reply